ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಸೆ.6 ರಿಂದ 8ರ ವರೆಗೆ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವು ಶ್ರೀ ಕ್ಷೇತ್ರ ತಿಮರೋಡಿ’ ಕುಂಜರ್ಪ ವಠಾರ ಉಜಿರೆಯಲ್ಲಿ ಜರಗಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಸಭೆಯನ್ನು ಮಾಡುವುದೇ, ಧರ್ಮದ ಮೇಲೆ ನಡೆಯುವ ಅನ್ಯಾಯದ ವಿರುದ್ಧ, ಜನರಿಗೆ ಸತ್ಯದ ದಾರಿಯನ್ನು ತೋರಿಸುವ ಮುಖಾಂತರ ಸನಾತನ ಹಿಂದೂ ಧರ್ಮದ ಪರಿಕಲ್ಪನೆಯನ್ನು ಜನರಿಗೆ ತಿಳಿಸುವುದೇ ಧಾರ್ಮಿಕ ಸಭೆಯ ಉದ್ದೇಶ ಎಂದರು.
ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣವರ್ ಮಾತನಾಡಿ ರಾಜಕೀಯ ವ್ಯಕ್ತಿಗಳು ಹಿಂದುತ್ವವನ್ನು ಅಕ್ಷರಶಃ ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ. ಶ್ರೀಕೃಷ್ಣ ಪರಮಾತ್ಮ ಜನ ಸಾಮಾನ್ಯರ ಸಂಘಟನೆಯ ರೂಪದಲ್ಲಿ ನ್ಯಾಯ ಕೊಡಿಸುವುದಕ್ಕೆ ಬರುತ್ತಾನೆ ಎಂದು ಸಂಘಟನೆಯ ಶಕ್ತಿಯನ್ನು ವಿವರಿಸಿದರು.
ಮುಖ್ಯ ಅತಿಥಿಯಾಗಿ ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಸುಮಾ ಎಲ್. ಎನ್. ಶಾಸ್ತ್ರಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ನಡಿಬೆಟ್ಟು ಉಪಸ್ಥಿತರಿದ್ದರು.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪ್ರಾಸ್ತವಿಕವಾಗಿ ಮಾತನಾಡಿ, ನಿರೂಪಿಸಿ, ಧನ್ಯವಾದವಿತ್ತರು. ಜಗದೀಶ್ ನಿಡ್ಲೆ ಸ್ವಾಗತಿಸಿದರು.