25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.
ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ . ದ್ವಿತೀಯ ಸ್ಥಾನ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪ್ರೌಢಶಾಲೆ ಕಾಯರ್ತ್ತಡ್ಕ , ದ್ವಿತೀಯ ಸ್ಥಾನ ಸರ್ಕಾರಿ ಪ್ರೌಢಶಾಲೆ ಬದನಾಜೆ ಪಡೆದುಕೊಂಡಿತು.

ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕೋಕಿಲ ವಂದಿಸಿದರು. ಶಿಕ್ಷಕರಾದ ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!