26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಮಾತನಾಡುತ್ತಾ, ಪಿಯುಸಿ ಹಂತದಲ್ಲಿರುವ ಮಕ್ಕಳನ್ನು ಹೆತ್ತವರು ಸ್ನೇಹಿತರಂತೆ ಕಾಣುತ್ತಾ ಅವರಿಗೆ ಭರವಸೆಯನ್ನು ತುಂಬುತ್ತಾ ಓದಿನ ಕಡೆ ಗಮನಹರಿಸುವಂತೆ ಪ್ರೋತ್ಸಾಹಿಸಬೇಕು. ತಪ್ಪುಗಳನ್ನು ಎಸೆದಾಗ ಸಾವಧಾನದಿಂದ ಬುದ್ಧಿ ಹೇಳಿ ತಿದ್ದಿಕೊಳ್ಳಲು ಅವಕಾಶ ನೀಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!