26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು.

ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ನಂತರ ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಡಂಗೆ ಗುತ್ತು ಕೊಕ್ರಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ರಮೇಶ್ ಪಿಲಿಯೂರು, ಜೊತೆಕಾರ್ಯದರ್ಶಿ ಪರಮೇಶ್ವರ ಗೌಡ , ಕೋಶಾಧಿಕಾರಿ ಸುಂದರ ಭಂಡಾರಿ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ತುಳು ಪರ್ಬ ಮಂಗಳೂರು ಸಂಯೋಜನೆಯಲ್ಲಿ ಡಿ. ಮನೋಹರ್ ಕುಮಾರ್ ವಿರಚಿತ ‘ತಿರುಮಲೆ ತೀರ್ಥ’ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಿತು.

Related posts

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya
error: Content is protected !!