26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರುನಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಡಳಿತ ಮೊಕ್ತೇಸರ ರಾಜೀವ್ ಅವರ ನೇತೃತ್ವದಲ್ಲಿ ವೈಭವ ಪೂರ್ಣವಾಗಿ ಜರುಗಿತು.


ಸೆ.7ರಂದು ಬೆಳಿಗ್ಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಮಹಾಗಣಪತಿ ದೇವರಿಗೆ ಗಣಹೋಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ

ಮೊದಲಾದ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ ನಡೆಯಿತು.

ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ , ಗಣಪತಿ ದೇವರ ವಿಗ್ರಹ ಜಲಸ್ತಂಭನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೀವ್, ಶ್ರೀ ನಾಗಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯದರ್ಶಿ ಜಯರಾಜ್, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಹಾಗೂ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮಂಗಳಗಿರಿ ಸ್ವಸಹಾಯ ತಂಡದವರು ಪೂರ್ಣ ಸಹಕಾರ ನೀಡಿದರು.

ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!