26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಲಾಯಿಲ : ತಂತ್ರಜ್ಞಾನದ ವಿದ್ಯೆ ಎನ್ನುವಂತದ್ದು ಇಂದಿನ ಪ್ರಾಪಂಚಿಕ ವ್ಯವಹಾರಕ್ಕೆ ಅತ್ಯವಶ್ಯವಾಗಿದೆ. ಜೀವನದಲ್ಲಿ ಕಲಿಕೆ ನಿರಂತರವಾಗಿರಬೇಕು. ಜ್ಞಾನವು ಎಂದೂ ಕರಗದ ಸಂಪತ್ತು. ತಾವುಗಳು ಮುಂದಿನ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಇಷ್ಟು ದೊಡ್ಡ ಸಂಸ್ಥೆಯಲ್ಲಿ ಬಂದು ತಾವು ಕಂಪ್ಯೂಟ‌ರ್ ತರಗತಿ ಪಡೆದುಕೊಂಡಿದ್ದು ತಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ – ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ – ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿ ಶ್ರೀನಿವಾಸ್ ಕಂಪ್ಯೂಟ‌ರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 22 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸೋಮನಾಥ್ ಕೆ. ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Related posts

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya
error: Content is protected !!