29.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!