24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya
error: Content is protected !!