ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ
ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ಸೆ 09ರಂದು ಅಪರಾಹ್ಣ 3–00 ಗಂಟೆಗೆ ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಲಾಯಿತು.ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಗಮಕ ಕಲಾವಿದರು , ಚಿಂತಕರು, ಸಾಹಿತಿಗಳೂ ಆಗಿರುವ ಪ್ರೊ.ಗಣಪತಿ ಭಟ್ ಕುಳಮರ್ವ ಮತ್ತು ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುಮಾರವ್ಯಾಸನ ಕೌರವೇಂದ್ರನ ಕೊಂದೆ ನೀನು ಕಾವ್ಯವನ್ನು ಶ್ರೀ ವಿಶ್ವೇಶ್ವರ ಭಟ್ಟರು ವಾಚಿಸಿ, ಪ್ರೊ. ಗಣಪತಿ ಭಟ್ ಕುಳಮರ್ವರು ವ್ಯಾಖ್ಯಾನಿಸಿದರು.ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡದ್ದುಕಾರ್ಯಕ್ರಮದ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾರವರು ವಹಿಸಿಕೊಂಡು ಅಭಾಸಾಪದ ಸಾಹಿತ್ಯದ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆಆರಂಭಗೊಂಡಿತು. ಅಭಾಸಾಪ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಆಶಾ ಅಡೂರ್‌ರವರು ಧನ್ಯವಾದವನ್ನಿತ್ತರು. ಶಾಲಾ ಸಿಬ್ಬಂದಿಯರೊಂದಿಗೆ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಮೇಧಾರವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಿಗೂ, ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿಗೂ.. ವಿದ್ಯಾರ್ಥಿಗಳಿಗೂ ಅಭಾಸಾಪದ ಪರವಾಗಿ ಪುಸ್ತಕ ಸ್ಮರಣಿಕೆಯನ್ನು ನೀಡಲಾಯಿತು

Leave a Comment

error: Content is protected !!