ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ
ಮಕ್ಕಳೊಂದಿಗೆ ಭಾವನಾತ್ಮಕವಾಗಿ ಮಾತಾಡಿ ಸ್ನೇಹಿತರಂತೆ ಹೇಳಿಕೊಟ್ಟು ನಂಬಿಕೆಯಿಂದ ಜೀವನ ನಡೆಸಬೇಕು ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಆನಂದ. ಡಿ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಗದ್ದೆಯಲ್ಲಿ ಬೀಜ ಬಿತ್ತಿ ಉತ್ತಮ ಫಲ ಪಡೆದ ಹಾಗೆ ಮೌಲ್ಯಯುತವಾದ ಜೀವನ ಕ್ರಮಗಳನ್ನು ತಿಳಿಸಿ ಉತ್ತಮ ವ್ಯಕ್ತಿತ್ವವನ್ನು ಪಡೆಯುವಂತೆ ಪ್ರೇರಣೆಯನ್ನು ನೀಡಬೇಕು. ಸಮಾಜದ ಎಲ್ಲಾ ವಿಚಾರಗಳಲ್ಲಿ ಮಕ್ಕಳು ಪಾಲುಗೊಳ್ಳುವಂತೆ ಪೋಷಕರು ಕಾಳಜಿ ವಹಿಸಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ, ಕಾರ್ಯಕ್ರಮ ನಿರೂಪಿಸಿದವರು.