ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಇದರ ವತಿಯಿಂದ ಹಾಗೂ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (SNDP), ತೋಟತ್ತಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇವರ ಜಂಟಿ ಸಹಯೋಗದೊಂದಿಗೆ ಸೆ.೯ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಭವನ ಕಕ್ಕಿಂಜೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಹಿಸಿದ್ದರು.
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಗ್ಗೆ ಸವಿವರದ ಮಾಹಿತಿಯನ್ನು ಸಂಘದ ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು ನೀಡಿದರು. ಸುಮಾರು 250ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶಾರದ ಐ., ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ ಇದರ ಅಧ್ಯಕ್ಷ ಯಶೋಧರ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಅಧ್ಯಕ್ಷ ಸನತ್ ಕುಮಾರ್ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇದರ ಅಧ್ಯಕ್ಷರಾದ ಶ್ರೀ ಪ್ರಕಾಶ್ ಹೊಸ್ಮಠ, ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿಯಾದ ಶ್ರೀ ಪುರುಷೋತ್ತಮ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವತ್ಥ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ ಇದರ ಕಾರ್ಯದರ್ಶಿ ಸುರೇಶ್ ಸ್ವಾಗತಿಸಿ, ಕಕ್ಕಿಂಜೆ ಶಾಖೆ ಶಾಖಾ ವ್ಯವಸ್ಥಾಪಕ ಜಾರಪ್ಪ ಪೂಜಾರಿಯವರು ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕಚೇರಿಯ ಹಿರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಹಿರಿಯ ವ್ಯವಸ್ಥಾಪಕಿ ಶ್ರೀಮತಿ ರೂಪಲತಾ, ಆಂತರಿಕ ಲೆಕ್ಕ ಪರಿಶೋಧಕ ಶರತ್ ಕುಮಾರ್, ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.