September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಸಭೆಯು ಆಡಳಿತ ಮೊಕೇಸರರಾದ ಸುಕೇಶ್ ಕುಮಾರ್ ಕಡಂಬು ಇವರ ಅಧ್ಯಕ್ಷತೆಯಲ್ಲಿ ಸೆ 10 ರಂದು ಅರಮಲೆ ಬೆಟ್ಟ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ನಡೆಯಿತು.

ಸಭೆಯಲ್ಲಿ ಕುಂಭಾಭಿಷೇಕ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾಗಿ ಪುರಂದರ ಶೆಟ್ಟಿ ಪಾಡ್ಯಾರು, ಕೋಶಾಧಿಕಾರಿಯಾಗಿ ಪ್ರದೀಪ್ ಶೆಟ್ಟಿ ಶಕ್ತಿನಗರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ ಶೆಟ್ಟಿ ನವಶಕ್ತಿ ಮಾತನಾಡಿ ಅರಮಲೆ ಬೆಟ್ಟ ಕ್ಷೇತ್ರ ಬಹಳ ಕಾರಣೀಕ ಕ್ಷೇತ್ರವಾಗಿದ್ದು ಗ್ರಾಮಸ್ಥರು ಎಲ್ಲರೂ ಒಟ್ಟಾಗಿ ಸೇರಿ ನಮ್ಮ ಗ್ರಾಮದ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಗೋಪಾಲಕೃಷ್ಣ ತಂತ್ರಿ, ಜಯರಾಮ ಶೆಟ್ಟಿ ಪಡಂಗಡಿ, ಶುಭ ಹಾರೈಸಿದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ,ಎಕ್ಸೆಲ್ ಕಾಲೇಜಿನ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅನಿಸಿಕೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಧರಣೇಂದ್ರ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಪುರಂದರ ಶೆಟ್ಟಿ ಧನ್ಯವಾದವಿತ್ತರು. ಇದೇ ಬರುವ ಸೆಪ್ಟೆಂಬರ್ 18 ರಂದು ಕ್ಷೇತ್ರದಲ್ಲಿ ಪ್ರಶ್ನಾ ಚಿಂತನೆಗಳು ನಡೆಯಲಿದೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!