ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮರೋಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಶುಪಾಲನಾ ಅಧಿಕಾರಿಗಳಾದ ಕೆ ಸದಾಶಿವ ಭಟ್, ಸುಕೀರ್ತಿ ಜೈನ್ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಪೆರಾಡಿ ಮತ್ತು ಮರೋಡಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಬಿರಗಳಲ್ಲಿ ಸುಮಾರು ೧೯೨ ಸಾಕು ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ನೀಡಲಾಯಿತು.