27.5 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Related posts

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya
error: Content is protected !!