September 6, 2026
Uncategorized

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಹದಿಹರೆಯದ ಮಕ್ಕಳೊಂದಿಗೆ ಹೆತ್ತವರು ಸ್ನೇಹಿತರಂತಿದ್ದು ಭಾವನಾತ್ಮಕವಾದ ಸಂಬಂಧವನ್ನು ಹೊಂದಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಓದುವ ಸಮಯದಲ್ಲಿ ಪೋಷಕರು ಮಕ್ಕಳಿಗೆ ಹೆಚ್ಚು ಒತ್ತಡವನ್ನು ಹಾಕಬಾರದು. ಉತ್ತಮವಾದ ಸಂವಹನದ ಮೂಲಕ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಬೇಕು. ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ತಲುಪುವಲ್ಲಿ ಪೋಷಕರು ಜವಾಬ್ದಾರಿಯನ್ನು ವಹಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು.

Related posts

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya
error: Content is protected !!