ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ 2024- 25 ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ- ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಶಾಲಾ ಮೈದಾನದಲ್ಲಿ ನಡೆಯಿತು.
ಬೆಳಿಗ್ಗೆ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿದ್ದು. ಈ ಕಾರ್ಯಕ್ರಮಕ್ಕೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಶ್ವರಿಯವರು ಆಗಮಿಸಿ ಶುಭ ಹಾರೈಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿರುವ ಶ್ರೀಮತಿ ಸುಜಯ ಮೇಡಂ ರವರು ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವ ಹಾಗೂ ವಿದ್ಯಾರ್ಥಿಗಳು ಶಿಸ್ತು ಹಾಗೂ ಕ್ರೀಡೆಯಲ್ಲಿ ಪರಸ್ವರ ಸೌಹಾರ್ದದಿಂದ ಭಾಗವಹಿಸಬೇಕೆಂದು ಕರೆ ನೀಡಿದರು. ಶಾಲಾ ಎಸ್.ಡಿ.ಎಂ.ಸಿಯ ಶಿಕ್ಷಣ ತಜ್ಞರಾದ ಡಾ| ಮಾಧವ ಶೆಟ್ಟಿಯವರು ಕಾರ್ಯಕ್ರಮವನ್ನು ಜ್ಯೋತಿ ಬೆಳಕಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು, ಸುಸ್ಥಿರ ಸಮಾಜ ನಿರ್ಮಾಣಕ್ಕೆ ತಮ್ಮನ್ನು ಅರ್ಪಿಸಿಕೊಳ್ಳಬೇಕೆಂದು ತಿಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲೆಯ ಎಸ್. ಡಿ.ಎಂ.ಸಿ ಕಾರ್ಯಧ್ಯಕ್ಷರಾದ ಶ್ರೀ ಹೊನ್ನಪ್ಪ ಸಾಲಿಯಾನ್ ಇವರು ವಹಿಸಿದ್ದರು. ಬಾಲಕ ಹಾಗೂ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ, ಮಚ್ಚಿನವು ಎರಡು ವಿಭಾಗದಲ್ಲೂ ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಿ.ಆರ್.ಪಿಯಾದ ಶ್ರೀಮತಿ ಚೇತನ ಮೇಡಂ, ಎಸ್.ಡಿ.ಎಂ.ಸಿ ಸದಸ್ಯರಾದ ದಿನೇಶ್ ನಾಯ್ಕ್, ಶ್ರೀ ಕೂಸಪ್ಪ ಮೂಲ್ಯ, ಶ್ರೀಮತಿ ಭವ್ಯ, ನಿಕಟಪೂರ್ವ ಎಸ್. ಡಿ .ಎಂ .ಸಿ ಕಾರ್ಯಾಧ್ಯಕ್ಷರಾದ ರುಕ್ಮಯ ಬಾಳಿಂಜ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಕಾಶ್. ಎಸ್ .ನಾಯ್ಕ್ ರವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸುಭಾಶ್ಚಂದ್ರ ಪಿ. ಪೂಜಾರಿಯವರು ಧನ್ಯವಾದವಿತ್ತರು. ಶಾಲಾ ಹಿಂದಿ ಶಿಕ್ಷಕರಾದ ವಿ.ಚಂದಪ್ಪ ಪೂಜಾರಿಯವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದ್ದರು.