April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಪಡಂಗಡಿ: ಇಲ್ಲಿಯ ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡಂಗಡಿ ನಿವಾಸಿ ಸುಜಿತ್‌ ಶೆಟ್ಟಿ (22ವ) ಗಾಯಗೊಂಡವರು ಎಂದು ತಿಳಿದು ಬಂದಿದೆ.

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಇವರು ಬೆಳಗ್ಗೆ 4.30ರ ಸುಮಾರಿಗೆ ಮನೆಯಿಂದ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಜಿತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಘಾತ ನಡೆಸಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ.ಆಂಬ್ಯೂಲೆನ್ಸ್‌ ಚಾಲಕ ಜಲೀಲ್ ಅವರ ಸಹಕಾರದೊಂದಿಗೆ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ನಡೆಸಿದ ಅಪರಿಚಿತ ವಾಹನದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!