April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!