September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬನ್ನಿಸ್ , ಕಬ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣಪತಿಯನ್ನು ರಚನೆ ಮಾಡಿ, ಪೂಜಿಸಿ, ಆರಾಧಿಸಿ ನಂತರ ವಿಸರ್ಜಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಟ್ಟಣ ಪಂಚಾಯಿತಿಯ ಮುಖ್ಯಧಿಕಾರಿ ರಾಜೇಶ್ ಬಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಧಿಕಾರಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ದೆಯು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು‌ ನಡೆಸುತಾ ಬಂದಿದ್ದು, ಪರಿಸರ ಸ್ನೇಹಿ ಗಣಪತಿಯನ್ನು ರಚಿಸುವುದರಲ್ಲಿಯೂ ಸಮಾಜದ ಹಿತರಕ್ಷಣೆಯ ಕಾರ್ಯವನ್ನು ಸಾಧಿಸಿದೆ ಎಂದು ತಿಳಿಸಿದರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ವಿ ಶೆಟ್ಟಿ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ಕಾರುಣ್ಯ ಸ್ಕೌಟ್ ಮಾಸ್ಟರ್ ಗಳಾದ ಜಯರಾಮ್, ಮಂಜುನಾಥ್ ರವರ ಸಹಕಾರದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!