23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

ವೇಣೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಸೆ.8ರಂದು ಉಜಿರೆಯಲ್ಲಿ ನಡೆದ ಗಣೇಶ ಚತುರ್ಥಿ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಷಮ್ಯ ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಚಂದ್ರರಾಜ್ ವೇಣೂರು ಎಂಬವರು ವೇಣೂರು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಇವತ್ತು ಧರ್ಮಸ್ಥಳ ಅನ್ನುವಂತಹ ಆ ಒಂದು ಸನಾತನ ಹಿಂದೂ ಧರ್ಮದ ಧರ್ಮಪೀಠ, ನ್ಯಾಯಪೀಠ ಏನಿದೆಯೋ ಅದು ಇವತ್ತು ಜೈನರ ವಶವಾಗಿದೆ. ಪೋರ್ಚುಗೀಸರು, ಡಚ್ಚರು, ಫ್ರೆಂಚರು, ಬ್ರಿಟಿಷರು, ಇವತ್ತು ಜೈನರು ಕೂಡ ಸ್ವತಂತ್ರ ಭಾರತದಲ್ಲಿ ಸನಾತನವಾದ ಹಿಂದೂ ಧರ್ಮವನ್ನು ಹಿಂದೂ ದೇವಸ್ಥಾನಗಳ ದಾಖಲೆಗಳನ್ನು ನಾಶ ಮಾಡಿ ಜೈನರ ವಶ ಮಾಡಿಕೊಂಡಿದ್ದಾರೆ. ಶೇ.0.04 ಇರುವ ಜೈನರು ಶೇ.86 ಇರುವ ಹಿಂದೂಗಳನ್ನು ಮೂರ್ಖರನ್ನಾಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಾಂತಿಯಾಗುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಭಾಷಣ ಮಾಡಿದ್ದಾರೆ. ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ, ಟೀಕೆ ಮಾಡಿದ್ದು ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಜೈನ ಮತ್ತು ಹಿಂದೂ ಧರ್ಮ, ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟು ಮಾಡಲು ಮತ್ತು ಜನರು ದಂಗೆ ಏಳುವಂತೆ ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ 2023ರ ಕಾಯ್ದೆಯ ಕಲಂ 196, 197, 299ರ ಅಡಿಯಲ್ಲಿ ಮಾತ್ರವಲ್ಲದೆ, ಇತರ ಕಾನೂನುಗಳ ಅಡಿಯಲ್ಲಿ ತ್ವರಿತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya
error: Content is protected !!