31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು. ಭಾರತವು ಬಹುಭಾಷ ದೇಶವಾಗಿದ್ದು ಎಲ್ಲಾ ಭಾಷೆಗಳು ಇಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಶಿಕ್ಷಕ ಸೋಮಶೇಖರ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ವಿದ್ಯಾರ್ಥಿನಿ ಇಶಿತ ಹಾಗೂ ಆನೆಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಆಯಿಷಾ ಅಸ್ಮಿನ್ ಸ್ವಾಗತಿಸಿ ವಿದ್ಯಾರ್ಥಿ ಅನಿಶ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
error: Content is protected !!