September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬಳಂಜ ಶಾಲಾ ಮಕ್ಕಳು 8 ರಿಂದ 10ನೇ ತರಗತಿ ಪ್ರಥಮ ಸ್ಥಾನ, 5 ರಿಂದ 7ನೇ ತರಗತಿ ದ್ವಿತೀಯ ಸ್ಥಾನ ಹಾಗೂ 1 ರಿಂದ ನಾಲ್ಕನೇ ತರಗತಿ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿದ್ದಾರೆ.

ವಿಜೇತರಾದ ಮಕ್ಕಳು, ಪೋಷಕರು ಹಾಗೂ ತರಬೇತಿ ನೀಡಿದ ಶಾಲಾ ಶಿಕ್ಷಕಿ ಜೀವಿತಾ, ಪ್ರತೀಕ್ಷಾರವರು ತಂಡಗಳಿಗೆ ಬಂದ ನಗದು ಬಹುಮಾನದಲ್ಲಿ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳನ್ನು ಸೆಪ್ಟೆಂಬರ್ 13 ರಂದು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ.ಸಿ.ಆರ್ ರವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!