ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ನಡೆಯಲಿದ್ದು ಸೆ.13 ರಂದು ವಾಣಿ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಉದ್ಘಾಟಿಸಿ ಶುಭಾಹಾರೈಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮಂಗಳೂರು ಸದಸ್ಯ ಶೈಲೇಶ್ ಕುಮಾರ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಕನ್ನಡ ಪ್ರಾದ್ಯಾಪಕರು ಡಾ. ದಿವಾ ಕೊಕ್ಕಡ ಉಪಸ್ಥಿತರಿದ್ದರು. ತುಳು ಕಲಿಕಾ ಶಿಕ್ಷಕಿ ಸಂಧ್ಯಾ ಸೇರಿದಂತೆ 55 ಮಂದಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿದರು.
ಸಿಂಚನಾ , ಜಯಶ್ರೀ , ಕೀರ್ತಿ ಪ್ರಾರ್ಥಿಸಿದರು. ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜು, ಪ್ರಾಂಶುಪಾಲರು ಯದುಪತಿ ಗೌಡ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು.