24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

ಬೆಳ್ತಂಗಡಿ: ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ದಿವ್ಯ ಆಶೀರ್ವಾದದೊಂದಿಗೆ ಸೆ.೧೬ರಂದು ಸಂಘದ ಸಭಾಭವನದಲ್ಲಿ ಶಿವಪ್ರಸಾದ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಜರಗಲಿರುವುದು ಎಂದು ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ತಿಳಿಸಿರುತ್ತಾರೆ.

ಬೆಳಿಗ್ಗೆ 11ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭಾ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಲಿದ್ದಾರೆ. ಮುರ್ಡೇಶ್ವರ ಆರ್‌ಎನ್‌ಎಸ್ ಪಾಲಿಟೆಕ್ನಿಕ್ ವಿಭಾಗೀಯ ಮುಖ್ಯಸ್ಥ ಚೇಂಪಿ ದಿನೇಶ್ ಆಚಾರ್ಯ ಧಾರ್ಮಿಕ ಉಪನ್ಯಾಸವನ್ನು ನೀಡಲಿದ್ದಾರೆ.

ಗೌರವ ಉಪಸ್ಥಿತಿಯನ್ನು ಉದ್ಯಮಿ ಬಿ.ಕೆ. ಸತೀಶ ಆಚಾರ್ಯ, ಶ್ರೀ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ತಾಲೂಕು ಘಟಕ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ, ಯುವ ಉದ್ಯಮಿಗಳು ಶಿಲ್ಪಿ ಶಶಿಧರ ಆಚಾರ್ಯ, ಪ್ರಾಧ್ಯಾಪಕ ತಾರಾನಾಥ ಆಚಾರ್ಯ, ಬೆಳ್ತಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್ ಆಚಾರ್ಯ ವಹಿಸಲಿದ್ದಾರೆ.
ವಿಶೇಷ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 1.30ರಿಂದ ಆಕರ್ಷಣ ಕಲಾ ತಂಡ, ಬೆಳ್ತಂಗಡಿ ಅಭಿನಯಿಸುವ ರಾಜೇಶ್ ಆಚಾರ್ಯ ಕಥೆ-ಸಾಹಿತ್ಯ-ಸಂಭಾಷಣೆಯ, ದಿನೇಶ್ ಕೋಟ್ಯಾನ್ ನಿರ್ದೇಶನ ಹಾಗೂ ನಿರ್ಮಾಣದ “ಪಂಡಿನವು ನೆನಪಿಪ್ಪಡ್” ತುಳು ಸಾಮಾಜಿಕ ಸಾಂಸಾರಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!