September 6, 2026
ತಾಲೂಕು ಸುದ್ದಿ

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ ಸೆ. 14ರಂದು ನಡೆಯಿತು.
ಜನಪದ ಕುಣಿತಗಳು ಮತ್ತು ಹಾಡುಗಳ ಬಗ್ಗೆ ಕಲಾವಿದರಾದ ಜಯರಾಮ್ ಮುಂಡಾಜೆ ಹಾಗೂ ನಾಟಕ ರಚನೆ ಬಗ್ಗೆ ಆಕಾಶವಾಣಿ ಕಲಾವಿದೆ ಶ್ರೀಮತಿ ಅಕ್ಷತರಾಜ್ ಪೆರ್ಲ ಕಮ್ಮಟವನ್ನು ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಘದ ಸಂಯೋಜಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya
error: Content is protected !!