23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ಅರಸಿನಮಕ್ಕಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ. 15ರಂದು ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ರಾಜು ಕೆ, ನಿರ್ದೇಶಕರಾದ ಕೊರಗಪ್ಪ ಗೌಡ, ರತೀಶ್ ಬಿ, ಧರ್ಮರಾಜ್ ಎ., ಶ್ರೀಮತಿ ಶ್ರೀಮತಿ ತಾರಾ ಟಿ. ಚಿಪ್ಳುಣ್ ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ ನಾಗೇಶ್ ಜಿ.,ಕುಶಾಲಪ್ಪ ಗೌಡ, ಬೇಬಿ ಕಿರಣ್, ಮುರಳೀಧರ ಶೆಟ್ಟಿಗಾರ್, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ಉಪಸ್ಥಿತರಿದ್ದರು.

ವರದಿ ವರ್ಷದಲ್ಲಿ ರೂ. 317ಕೋಟಿ ವ್ಯವಹಾರ ಆಗಿರುತ್ತದೆ ಮತ್ತು ಇದರಿಂದ ಸಂಘಕ್ಕೆ ರೂ.1.52 ಕೋಟಿ ಲಾಭ ಬಂದಿರುತ್ತದೆ, ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡುವುದಾಗಿ ಅಧ್ಯಕ್ಷರು ಘೋಷಿಸಿದರು.

ಈ ಸಂದರ್ಭ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ ಇವರನ್ನು ಸನ್ಮಾನಿಸಲಾಯಿತು ಹಾಗೂ 2023- 24 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಧನವಿತ್ತು ಪುರಸ್ಕರಿಸಲಾಯಿತು ಅಲ್ಲದೆ ನಿವೃತ್ತರಾದ ಶಿಕ್ಷಕಿಯರನ್ನು ಗೌರವಿಸಲಾಯಿತು. ಸುಂದರ ಉಪ್ಪರಕ್ಕ ರವರಿಗೆ ಕನ್ಯಾಡಿ ಸೇವಾ ಭಾರತಿ ವತಿಯಿಂದ ವೀಲ್ ಚರ್ ವಿತರಿಸಲಾಯಿತು

ಸುಜಿತಾ ರೈ ಪ್ರಾರ್ಥಿಸಿದರು ನಿರ್ದೇಶಕ ರತೀಶ್ ಗೌಡ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿ ಚಂದ್ರ ರಾವ್ ವಾರ್ಷಿಕ ವರದಿ ಓದಿದರು. ಉಪ ಕಾರ್ಯದರ್ಶಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಮರಳೀಧರ ಶೆಟ್ಟಿಗಾರ್ ಧನ್ಯವಾದಗಳು

Related posts

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!