September 6, 2026
Uncategorized

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ : ಸೆ 15 ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು , ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರು, ಪ್ರಗತಿಪರ ಕೃಷಿಕರಾದ ಚಂದಪ್ಪ ಪೂಜಾರಿ ಮಲ್ಲಕಂಬ ಸ್ಪರ್ಧೆಗೆ ಚಾಲನೆ ನೀಡಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಯುವಕ ಮಂಡಲ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ-ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!