ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

Updated on:

ಬೆಳ್ತಂಗಡಿ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟಕ್ಕಿಂತ ಹೆಚ್ಚಿನ ಹಂತಗಳಲ್ಲಿ ವಿಶೇಷ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಸೆ.16 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಮಾಜಿ ಲಯನ್ಸ್ ರಾಜ್ಯಪಾಲ ಎಂ.ಬಿ ಸದಾಶಿವ ಗೌಡ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದರು.


ಮುಖ್ಯ ಅತಿಥಿಗಳಾದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಪ್ರಾಸ್ತವಿಕವಾಗಿ ಮಾತನಾಡಿದರು., ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಿವೃತ್ತ ಡಿ.ಜಿ.ಎಂ. (ಮಾನವ ಸಂಪನ್ಮೂಲ) ತಿಮ್ಮಪ್ಪ ಗೌಡ ಎಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಪಂದನಾ ಸೇವಾ ಸಂಘದ ಸಂಚಾಲಕ ಸೀತಾರಾಮ ಕೆ., ಯುವ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕೋಶಾಧಿಕಾರಿ ಯುವರಾಜ್ ಅನಾರು, ಉಪಾಧ್ಯಕ್ಷರಾದ ನಾರಾಯಣಗೌಡ ದೇವಸ್ಯ, ಧರ್ಣಪ್ಪ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ, ನಿರ್ದೇಶಕರಾದ ಜಯಾನಂದ ಗೌಡ, ವಸಂತಗೌಡ. ಮಾಧವ ಗೌಡ, . ಡಿಎಮ್ ಗೌಡ. ವಿಜಯ್ ಕುಮಾರ್. ದಿನೇಶ್ ಗೌಡ., ಗೋಪಾಲಕೃಷ್ಣ..ಸುನಿಲ್.. ಭವಾನಿ ಕಾಂತಪ್ಪ., ಮಹಿಳಾ ವೇದಿಕೆ ಕಾರ್ಯದರ್ಶಿ ಶ್ರೀಮತಿ ಲೀಲಾ ಬೆಳಾಲು, ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ,. ಉಷಾ..ವಾಣಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಯದುಪತಿ ಗೌಡ, ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಆಡಳಿತ ಮಂಡಳಿಯ ಸದಸ್ಯರು ಮತ್ತು ನಿರ್ದೇಶಕರು, ಮಹಿಳಾ ವೇದಿಕೆ, ಯುವ ವೇದಿಕೆ, ಸ್ಪಂದನಾ ಸೇವಾ ಸಂಘ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಪಟ್ಟಣ ಪಂಚಾಯಿತಿನ ಅಧ್ಯಕ್ಷರಾಗಿ ಆಯ್ಕೆಯಾದ ಜಯಾನಂದ ಗೌಡರನ್ನು ಮತ್ತು ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಕುಶಾಲಪ್ಪ ಗೌಡರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು

ಕಾರ್ಯದರ್ಶಿ ಗಣೇಶ್ ಗೌಡ ಸ್ವಾಗತಿಸಿ, ಬೆಳಿಯಪ್ಪ ಕೆ. ಆನಂದ ಗೌಡ ಉಜಿರೆ , ಮೋಹನ್ ಗೌಡ ಕೊಯ್ಯೂರು ಕಾರ್ಯಕ್ರಮ ನಿರೂಪಿಸಿದರು. ಜೊತೆಕಾರ್ಯದರ್ಶಿ ಕೆ.ಎನ್. ಶ್ರೀನಾಥ್ ಧನ್ಯವಾದವಿತ್ತರು.

Leave a Comment

error: Content is protected !!