24.5 C
ಪುತ್ತೂರು, ಬೆಳ್ತಂಗಡಿ
April 5, 2025
ಧಾರ್ಮಿಕ

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

ಇಂದಬೆಟ್ಟು :ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದಿಂದ ನೇಮಕಗೊಂಡ ಆಡಳಿತ ಅಧಿಕಾರಿಯಾದ ಇಂದಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಇಂದು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಆನಂದ್ ಭಟ್, ಸಂತೋಷ್ ಉಂಬೆಜೆ, ರಾಜಶೇಖರ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!