ಬೆಳ್ತಂಗಡಿ ತಾಲೂಕು ಮಟ್ಟದ ಸ್ವಚ್ಛತಾ ಹಿ ಸೇವಾ ಅಭಿಯಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಾರಂತ್ ಅವರ ಅಧ್ಯಕ್ಷತೆ ವಹಿಸಿ, ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಬಳಿಕ ಹಸಿರು ಬಾವುಟ ಪ್ರದರ್ಶಿಸಿ ಸ್ವಚ್ಛತಾ ಜಿ ಸೇವಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಜರುಗಿತು.
ಪಿಡಿಒ ಪ್ರಕಾಶ್ ಶೆಟ್ಟಿ ಕಾರ್ಯಕ್ರಮಕ್ಕೆ ಹಾಜರಿದ್ದವರನ್ನು ಸ್ವಾಗತಿಸಿದರು. ತಾಲೂಕು ಸಂಯೋಜಕರಾದ ಜಯಾನಂದ ವಂದಿಸಿದರು.
ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವರ್ತಕರ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಎಸ್ ಡಿ ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.