25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

ರೆಖ್ಯ: ಮಂಗಳೂರು ಕ್ಷೇತ್ರದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸೆ.17 ರಂದು ರೆಖ್ಯಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಎಂಜಿರಕ್ಕೆ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಸಂಸದರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವಿಸ್ ರಸ್ತೆಯ ಕಾಮಗಾರಿಯ ಪರಿಶೀಲನೆಯನ್ನು ನಡೆಸಿದರು. ನಂತರ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಹಾನಿಯಾದ ದೇವಸ್ಥಾನವನ್ನು ಪರಿಶೀಲನೆ ನಡೆಸಿ, ಅನುದಾನವನ್ನು ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಈ ವೇಳೆ ಸಂಸದರು ಹಾಗೂ ಶಾಸಕ ಹರೀಶ್ ಪೂಂಜರವರನ್ನು ಗುಡ್ರಾದಿ ಹಾಗೂ ಕೊಲಾರು ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಕೊಲಾರು ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾಮಯ್ಯ ಗೌಡ ಹಾಗೂ ಗ್ರಾಮಸ್ಥರು ಸನ್ಮಾನಿಸಿದರು. ನಂತರ ಗ್ರಾಮಸ್ಥರು 94ಸಿ ಬಗ್ಗೆ ಮನವಿಯನ್ನು ಸಂಸದರಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್, ಬಿಜೆಪಿ ಗ್ರಾಮ ಸಮಿತಿ ಸದಸ್ಯರು , ಪದಾಧಿಕಾರಿಗಳು , ಕಾರ್ಯಕರ್ತರು , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya
error: Content is protected !!