ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಇವುಗಳ ಸ್ವಯಂ ಸೇವಕರು ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಸಾರುವ ಘೋಷಣೆಗಳನ್ನು ಹೇಳಿದರು. ಸಂವಿಧಾನದ ಪೀಠಿಕಾ ಭಾಗವನ್ನು ಉದ್ಘೋಷಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿ ಅಂಕಿತಾ , ಜೂನಿಯರ್ ರೆಡ್ ಕ್ರಾಸ್ ಅಧಿಕಾರಿಗಳಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.