22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

ಧಮ೯ಸ್ಥಳ: ಮನುಷ್ಯನಿಗೆ ಅಪತ್ತು ಯಾವಾಗ ಬರುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ, ಇಂತಹ ಸಂದರ್ಭದಲ್ಲಿ ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವವರು, ಸ್ವಾರ್ಥ ರಹಿತ ಸೇವೆಯನ್ನು ನೀಡುವವರು ಬೇಕು, ಶೌರ್ಯ ವಿಪತ್ತು ತಂಡ ಇಂತಹ ಮಾನವೀಯ ಸೇವೆಯನ್ನು ನೀಡುವ ಮೂಲಕ ಅಪತ್ಬಾಂಧವರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಸೆ.18ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇದರ ವತಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಭವನದಲ್ಲಿ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಯಾವುದಾದರೂ ಅಪತ್ತು ನಡೆದಾಗ ಅವರಿಗೆ ಸಹಾಯ ಮಾಡುವವರು ಯಾರು ಇರುವುದಿಲ್ಲ, ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರಿಕರಣ ಮಾಡುವರೇ ಇಂದು ಅಧಿಕವಾಗುತ್ತಿದ್ದಾರೆ. ಆದರೆ ವಿಪತ್ತು ನಿರ್ವಹಣಾ ತಂಡದವರು ತಕ್ಷಣ ಧಾಮಿಸಿ ಅಪತ್ತಿನಲ್ಲಿ ಸಿಲುಕಿದವರನ್ನು ರಕ್ಷಿಸುತ್ತಾರೆ. ಇಂತಹ ಸಾಹಸ ಪ್ರವೃತ್ತಿ ಸಂಘಟನೆಯಿಂದ ದೊರೆಯುತ್ತದೆ. ಸಂಕಷ್ಟದಲ್ಲಿರುವವರಿಗೆ ಸೇವೆ ನೀಡುವಂತದು ದೊಡ್ಡ ಧರ್ಮ, ನಮ್ಮನ್ನು ನಾವು ರಕ್ಷಿಸಿಕೊಂಡು ಇತರರಿಗೆ ಸೇವೆ ನೀಡುವುದೇ ನಿಜವಾದ ಮಾನವೀಯ ಸೇವೆ. ಸೇವೆಯಲ್ಲಿ ಯಾವುದೇ ಸ್ವಾರ್ಥ ಇರಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದವರಿಗೆ ಸಮವಸ್ತ್ರ ಹಾಗೂ ಪ್ರಮಾಣ ಪತ್ರ ವಿತರಣೆ ಹಾಗೂ ’ಶೌರ್ಯ ’ ಕೃತಿಯನ್ನು ಡಾ. ಹೆಗ್ಗಡೆಯವರು
ಬಿಡುಗಡೆ ಮಾಡಿದರು. ಎಂಟು ಮಂದಿಗೆ ಸಿಪಿಆರ್ ಹಾಡಿನ ಬಹುಮಾನವನ್ನು ವಿತರಿಸಲಾಯಿತು.

ಗಣೇಶ್ ಕಡಬ ಪ್ರಾರ್ಥನೆ ಹಾಡಿದರು. ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ಅವರು ಶೌರ್ಯ ಕಾರ್ಯಕ್ರಮದ ಸಾಧನೆಯ ಪಕ್ಷಿನೋಟ ನೀಡಿದರು. ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್ ಅವರು ಧನ್ಯವಾದವಿತ್ತರು. ಶೌರ್ಯ ಯೋಜನಾಧಿಕಾರಿ ಯಶವಂತ ಪಟಗಾರ ಉಪಸ್ಥಿತರಿದ್ದರು. ಯೋಜನಾಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!