ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ.20ರಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಗಾರ ನಡೆಯಲಿದೆ.
ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪದವಿಪೂರ್ವ ವಿಭಾಗದ ದಕ್ಷಿಣಕನ್ನಡ ಜಿಲ್ಲಾ ಉಪನಿರ್ದೇಶಕರಾದ ಸಿ.ಡಿ ಜಯಣ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಸುಕುಮಾರ ಜೈನ್ , ಶ್ರೀ ಧ.ಮಂ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ,
ಶ್ರೀ ಧ.ಮಂ ಪದವಿ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಎನ್. ಶ್ರೀಧರ ಭಟ್ , ಸರಕಾರಿ ಪ.ಪೂ ಕಾಲೇಜು , ಶೃಂಗೇರಿ ಇಲ್ಲಿನ ಸಂಸ್ಕೃತ ಭಾಷಾ ಉಪನ್ಯಾಸಕರಾದ ಡಾ. ಮಹೇಶ್ ಕಾಕತ್ಕರ್ ಇವರು ಭಾಗವಹಿಸಲಿದ್ದಾರೆ. ಹಾಗೆಯೇ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಇವರು ಶುಭಾಶಂಸನೆ ಮಾಡಲಿದ್ದಾರೆ .
ಹಾಗೆಯೇ ವಿವಿಧ ಗೋಷ್ಠಿಗಳಲ್ಲಿ ಡಾ. ಎನ್. ಶ್ರೀಧರ ಭಟ್ , ಡಾ. ಮಹೇಶ್ ಕಾಕತ್ಕರ್ ಹಾಗೂ ದರ್ಭೇತ್ತಡ್ಕದ ಶ್ರೀ ಶಂಕರ ವೇದವಿದ್ಯಾ ಗುರುಕುಲದ ಪ್ರಾಚಾರ್ಯ ವೇ.ಮೂ ಅಂಶುಮಾನ್ ಅಭ್ಯಂಕರ್ ಸಂಸ್ಕೃತ ಸಾಹಿತ್ಯದ ವಿವಿಧ ವಿಷಯಗಳ ಮೇಲೆ ವಿಷಯ ಮಂಡಿಸಲಿದ್ದಾರೆ. ದ.ಕ ಜಿಲ್ಲಾ ಪ.ಪೂ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ ಆಚಾರ್ಯ ಹಾಗೂ ಕಾರ್ಯದರ್ಶಿ ಡಾ.ಮಧುಕೇಶ್ವರ ಶಾಸ್ತ್ರಿ ಉಪಸ್ಥಿತರಿರುವರೆಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಕಾರ್ಯಾಗಾರದ ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.