24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆ ಗೆ ಕೊನೆಯ ದಿನವಾಗಿದೆ.
ಅಕ್ಟೋಬರ್ 4 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7 ನಾಮಪತ್ರಗಳ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 21 ಮತದಾನ ಬೆಳಿಗ್ಗೆ
8:00 ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಅಕ್ಟೋಬರ್ 24 ಮತ ಎಣಿಕೆ ನಡೆಯಲಿದೆ

Related posts

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
error: Content is protected !!