25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.

ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಲಾಯಿಲ, ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ. ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ ಶ್ರದ್ದಾ, ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!