ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.
ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಲಾಯಿಲ, ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ. ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ ಶ್ರದ್ದಾ, ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.