2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕತ್ತೋತರ ಪದವಿ/ಮೆಡಿಕಲ್/ಇಂಜಿನಿಯರಿಂಗ್/ ಇತರೆ ಕೋರ್ಸ್‌ಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈವರೆಗೆ Direct Benefit Transfer ಮೂಲಕ ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮೆಯಾಗುತ್ತಿದ್ದು, 2023-24ನೇ ಶೈಕ್ಷಣಿಕ ಸಾಲಿನಿಂದ ಪ.ಜಾತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಆದುದರಿಂದ 2024ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾತಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು.

ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪ.ಪಂಗಡದ ವಿದ್ಯಾರ್ಥಿಗಳಿಗೆ Direct Benefit Transfer ಮೂಲಕ ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮೆಯಾಗುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಈ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ www.sw.kar.nic.in/www.twd.karnataka.gov.in ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆದ್ದರಿಂದ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ www.sw.kar.nic.in/ www.twd.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸುವುದು ಹಾಗೂ ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರಿಂದ ದೃಢೀಕರಿಸಿ, ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ಕಛೇರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರನ್ನು ಸಂಪರ್ಕಿಸುವಂತೆ ಕೋರಿದೆ. (ದೂರವಾಣಿ ಸಂಖ್ಯೆ: 08256-233528)

Leave a Comment

error: Content is protected !!