September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕುಲಶೇಖರ ಕೊರ್ಡೆಲ್ ಹಾಲ್‌ನಲ್ಲಿ ಸೆ.೧೮ರಂದು ನಡೆಯಿತು.

ಒಕ್ಕೂಟವು 2023-24ನೇ ಸಾಲಿನಲ್ಲಿ ಒಟ್ಟು ರೂ. 1108.89 ಕೋಟಿಯ ವಹಿವಾಟು ಮಾಡಿ ಹಿಂದಿನ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 6.13% ರಷ್ಟು ಪ್ರಗತಿ ಸಾಧಿಸಲಾಗಿದೆ. ವರದಿ ಸಾಲಿನಲ್ಲಿ ರೂ. 8.28 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ.25ರಷ್ಟು ಬೋನಸ್ಸನ್ನು ಸಂಘಗಳು ಒಕ್ಕೂಟಕ್ಕೆ ವರ್ಷದಲ್ಲಿ ನೀಡಿದ ಹಾಲಿನ ಪ್ರಮಾಣಕ್ಕನುಗುಣವಾಗಿ ನೀಡಲು ಮತ್ತು ಶೇ.12ರಂತೆ ಡಿವಿಡೆಂಡ್ ನೀಡಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅತ್ಯುತ್ತಮ ಸಾಧನೆ ಮಾಡಿದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
2023-24ನೇ ಸಾಲಿನಲ್ಲಿs ಎಸ್ಸೆಸ್ಸೆಲ್ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಲು ಉತ್ಪಾದಕರ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಹಸಿರು ಮೇವು, ಉತ್ತಮ ಹೈನುಗಾರರು, ಉತ್ತಮಗುಣ ಮಟ್ಟದ ಸಂಘಗಳು ಹಾಗೂ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತರನ್ನು ಗೌರವಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ನಿರ್ದೇಶಕರುಗಳಾದ ರವಿರಾಜ ಹೆಗ್ಡೆ, ಕಾಪು ದಿವಾಕರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ., ನರಸಿಂಹ ಕಾಮತ್, ಬಿ. ಸುಧಾಕರ ರೈ, ಎಮ್. ಸುಧಾಕರ ಶೆಟ್ಟಿ, ಶ್ರೀಮತಿ ಸುಭದ್ರಾ ರಾವ್, ಶ್ರೀಮತಿ ಸವಿತ ಎನ್. ಶೆಟ್ಟಿ , ಶ್ರೀಮತಿ ಸ್ಮಿತಾ ಆರ್. ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಸಹಕಾರ ಸಂಘಗಳ ಉಪ ನಿಬಂಧಕರು, ಡಾ. ಅರುಣ್ ಕುಮಾರ್ ಶೆಟ್ಟಿ, ಉಪ ನಿರ್ದೇಶಕರು(ಪ.ಸಂ.) ಹಾಗೂ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ ಡಿ. ಹಾಜರಿದ್ದರು.

ಒಕ್ಕೂಟದ ಉಪಾಧ್ಯಕ್ಷಎಸ್. ಬಿ. ಜಯರಾಮ ರೈ ಬಳ್ಳಜ್ಜ ಸ್ವಾಗತಿಸಿ, ನಿರ್ದೇಶಕಿ ಶ್ರೀಮತಿ ಸ್ಮಿತಾ ಆರ್ ಶೆಟ್ಟಿ ವಂದಿಸಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
error: Content is protected !!