37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ಕೇಶವ ಎಂ ಕೆ ಕರ್ಮಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ, ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಗಿ ಸಂಗ್ರಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿ, ಚಿದಾನಂದ ಕಾರ್ಯಕ್ರಮ ನಿರೂಪಿಸಿ ನಿರ್ದೇಶಕ ಚೆನ್ನಕೇಶವ ಧನ್ಯವಾದವಿತ್ತರು.

Related posts

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya
error: Content is protected !!