37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು.

ಅವರು ಸೆ.20ರಂದು ಬೆಳ್ತಂಗಡಿ ಶ್ರೀಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2016ರಲ್ಲಿ ಕೃಷ್ಣರೆಡ್ಡಿಯವರ ನೇತೃತ್ವದಲ್ಲಿ ಈ ಪಕ್ಷ ಸ್ಥಾಪನೆಯಾಗಿದ್ದು, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಮೂಲಕ ರಾಜ್ಯದ ನೂರಾರು ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದೆ. ಸರಕಾರಿ ಕಚೇರಿಗಳಿಗೆ ಬರುವ ಜನಸಾಮಾನ್ಯರಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ, ಬಡವರಿಗೆ ಅನ್ಯಾಯವಾಗುತ್ತಿದೆ. ಯಾವುದೇ ಕೆಲಸ ಲಂಚ ನೀಡದೆ ಆಗುತ್ತಿಲ್ಲ, ತಾಲೂಕು ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇದೆ. ಇಂತಹ ವಿಷಯಗಳ ದೂರು ನಮಗೆ ಬಂದಾಗ ನಾವು ಅಮಾಯಕರ ಪರವಾಗಿ ಹೋರಾಟಗಳನ್ನು ನಡೆಸುತ್ತೇವೆ. ಯಾವುದೇ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ, ಅನ್ಯಾಯಗಳು ನಡೆದಾಗ ನಮ್ಮ ಕಾರ್ಯಕರ್ತರು ನ್ಯಾಯ ಒದಗಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಬಂಟ್ವಾಳ ಜೆಂಕ್ಷನ್‌ನಲ್ಲಿ ನಮ್ಮ ಪಕ್ಷದ ಜಿಲ್ಲಾ ಕಚೇರಿ ಇದ್ದು, ಸರಕಾರಿ ಕಚೇರಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ನಮ್ಮ ಗಮನಕ್ಕೆ ತರಬಹುದು. ಪತ್ರಿಕೆ ಅಥವಾ ಮಾಧ್ಯಮದ ಮೂಲಕ ನಮ್ಮ ಗಮನಕ್ಕೆ ಬಂದರೆ, ನಾವಾಗಿಯೇ ಖುದ್ದು ಬಂದು ಅವರಿಗೆ ಕೆಲಸ ಮಾಡಿಸಿಕೊಡುತ್ತೇವೆ. ಬೆಳ್ತಂಗಡಿ ತಾಲೂಕಿನಲ್ಲಿ ಈಗ ಪಕ್ಷ ಆಸ್ತಿತ್ವಕ್ಕೆ ಬಂದಿದ್ದು, ಮುಂದೆ ತಾಲೂಕಿನಲ್ಲಿ ಪಕ್ಷದ ಕಚೇರಿ ಆರಂಭವಾಗಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹೈದರಾಲಿ, ಪ್ರಧಾನ ಕಾರ್ಯದರ್ಶಿ ರಫೀಕ್ ಉಪ್ಪಿನಂಗಡಿ, ಕಾರ್ಯದರ್ಶಿಗಳಾದ ಆಶ್ರಫ್ ಜಾರಿಗೆಬೈಲ್, ರಮೀಝ್, ನಝೀರ್, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸಲೀಂ ಜಾರಿಗೆಬೈಲ್, ಶುಕ್ರು ಜಾರಿಗೆಬೈಲ್, ಜಿಲ್ಲಾ ಸಮಿತಿಯ ಅನೀಸ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!