April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ಇವರು ನೀಡಿದ ರೂ.1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್ ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಪೂರಣ್ ವರ್ಮಾ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಶೆಟ್ಟಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಇಸ್ರೋ ಹಿರಿಯ ವಿಜ್ಞಾನಿ ವಾಸುದೇವ್ ರಾವ್ ಪಿ, ಅಗ್ರಿಲೀಫ್ ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್, ಬ್ಯಾಂಕ್ ಆಫ್ ಬರೋಡ ನೂಜಿಬಾಳ್ತಿಲ ಶಾಖಾ ವ್ಯವಸ್ಥಾಪಕ ಶಿವಪ್ರಸಾದ್ ಸುರ್ಯ,
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಂದ ಭಟ್ ಕೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪುಷ್ಪಾ ಎನ್. ಹಾಗೂ ಶಾಲಾ ಅಧ್ಯಾಪಕ ವೃಂದ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಗಳು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya
error: Content is protected !!