April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಅನುದಾನಿತ ಪ್ರೌಢಶಾಲೆಯ ಹಿಂದಿ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಜಗದೀಶ್ ಉಪಸ್ಥಿತರಿದ್ದು ಹಿಂದಿ ದಿವಸದ ಕುರಿತು ಮಾತನಾಡಿದರು. ವಿದ್ಯಾರ್ಥಿ ಲೋಕೇಶ್ ಹಿಂದಿ ಭಾಷೆಯ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳಿಂದ ನೃತ್ಯ, ಕಿರು ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಯೋಜಕಿ ಹಿಂದಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಅವರು ಸ್ವಾಗತಿಸಿ ವಿದ್ಯಾರ್ಥಿಗಳಾದ ಲಿಖಿತ ವಂದಿಸಿ ಇಂದುಮತಿ ಮತ್ತು ಸೃಷ್ಟಿ ನಿರೂಪಿಸಿದರು.

Related posts

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!