ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಅನುದಾನಿತ ಪ್ರೌಢಶಾಲೆಯ ಹಿಂದಿ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಜಗದೀಶ್ ಉಪಸ್ಥಿತರಿದ್ದು ಹಿಂದಿ ದಿವಸದ ಕುರಿತು ಮಾತನಾಡಿದರು. ವಿದ್ಯಾರ್ಥಿ ಲೋಕೇಶ್ ಹಿಂದಿ ಭಾಷೆಯ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳಿಂದ ನೃತ್ಯ, ಕಿರು ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಯೋಜಕಿ ಹಿಂದಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಅವರು ಸ್ವಾಗತಿಸಿ ವಿದ್ಯಾರ್ಥಿಗಳಾದ ಲಿಖಿತ ವಂದಿಸಿ ಇಂದುಮತಿ ಮತ್ತು ಸೃಷ್ಟಿ ನಿರೂಪಿಸಿದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!