29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ

ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ ಮುನಿಗಳು ಕವಿಗಳು ಬೆಳೆಸಿದ ಸಂಸ್ಕೃತ ಭಾಷೆಯು ಮುಂದಿನ ಜನಾಂಗಕ್ಕೂ ದಾಟಬೇಕು. ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.

ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ. ಪ.ಪೂ. ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ, ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವುಗಳ ಸಹಯೋಗದಲ್ಲಿ ನಡೆದ ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಸುಕುಮಾರ ಜೈನ್ ಅವರು ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ತಳಹದಿ. ವಿದ್ಯಾರ್ಥಿಗಳ ಸಂಸ್ಕಾರ ಬೆಳೆಸುವಲ್ಲಿ ಭಾಷೆಗಳ ಕೊಡುಗೆ ಅಪಾರ ಎಂದು ನುಡಿದರು.

ವೇದಿಕೆಯಲ್ಲಿ ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ , ಎಸ್ ಡಿ ಎಂ ಪದವಿ ಕಾಲೇಜಿನ ಕಲಾ ವಿಭಾಗದ ಡೀನ್ ಡಾ.ಶ್ರೀಧರ ಭಟ್ , ಶೃಂಗೇರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಡಾ. ಮಹೇಶ ಕಾಕತ್ಕರ್ ಅಭ್ಯಾಗತರಾಗಿ ಮಾತನಾಡಿದರು. ಎಸ್ ಡಿ ಎಂ ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಇವರು ಶುಭಾಶಂಸನೆ ಮಾಡಿದರು.

ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಸ್ವಾಗತಿಸಿದರು , ಕಾರ್ಯದರ್ಶಿ ಡಾ.ಮಧುಕೇಶ್ವರ ಶಾಸ್ತ್ರಿ ವಂದಿಸಿದರು. ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಜಿರೆಯ ಎಸ್ ಡಿ ಎಂ ಸನಿವಾಸ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಮಹೇಶ್ ಭಟ್ ಪರಿಚಯಿಸಿದರು. ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!