32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ಮುಖ್ಯ ಅತಿಥಿ ಮುರಳಿ ಬಲಿಪ ನ್ಯಾಯವಾದಿ, ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸ.ಪ.ಪೂ.ಕಾಲೇಜು ನಡ ಪ್ರಾಂಶುಪಾಲ ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕ ಮೋಹನ ಬಾಬು ಡಿ., ನೋಡಲ್ ಅಧಿಕಾರಿ ಇಸಿಒ ಶ್ರೀಮತಿ ಚೇತನಾಕ್ಷಿ, ಶಿಕ್ಷಣ ಸಂಯೋಜಕರು, ಕ್ಲಸ್ಟರ್‌ಗಳ ಸಿಆರ್‌ಪಿಗಳು, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ವಸಂತ ಗೌಡ, ಸಮಿತಿಯ ಸದಸ್ಯರು, ಗಣ್ಯರು ಭಾಗವಹಿಸಿದ್ದರು.

ತಾಲೂಕಿನ ಸುಮಾರು 31 ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕರಾದ ಶಿವಪುತ್ರ ಮತ್ತು ಸುರೇಶ್ ನಿರೂಪಿಸಿ ವಂದಿಸಿದರು

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!