April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

ಇಂದಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಮಟ್ಟದ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರ ಸೆ.19ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಇಲಾಖೆಯ ಶ್ರೀಮತಿ ಅಮ್ಮಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸ್ವಚ್ಛತಾ ಹಿ ಸೇವಾ ಆಂದೋಲನದ ಬಗ್ಗೆ ಪಿಡಿಒ ಶ್ರೀಮತಿ ರಶ್ಮಿ ಮಾಹಿತಿ ನೀಡಿ ಪ್ರತಿಜ್ಞೆ ಬೋಧಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು, ಸದಸ್ಯರಾದ ಶ್ರೀಕಾಂತ್ ಎಸ್. ಇಂದಬೆಟ್ಟು, ಶಾಲಾ ಮುಖ್ಯೋಪಾಧ್ಯಾಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya
error: Content is protected !!