26 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

ಬಂದಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಉತ್ತಮ ಪಾಸರ್ ಆಗಿ ಕು. ಅತಿಶ್ರೀ ಬಂದಾರು, ಉತ್ತಮ ಹೊಡೆತಗಾರ್ತಿಯಾಗಿ ಕು. ಯಶ್ಮಿತಾ ಬಂದಾರು ವೈಯಕ್ತಿಕ ಬಹುಮಾನ ಪಡೆದಿರುತ್ತಾರೆ. ವಿಜೇತ ಬಂದಾರು ತಂಡದ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಸಹಕರಿಸಿದವರಿಗೆ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಅಭಿನಂದಿಸಿದರು.

Related posts

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!