23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

ಉಜಿರೆ:ಸೆ21. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್:ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಇಂಡಿಯಾದ ಅಕಾಡೆಮಿಕ್ ಎಕ್ಸಲೆನ್ಸ್ ಮ್ಯಾನೇಜರ್ ಆಗಿರುವ ಶ್ರೀಮತಿ ವಿದ್ಯಾ ನಾರಾಯಣನ್ ಕಲಿಕೆಯಲ್ಲಿ ಮತ್ತಷ್ಟು ಚಟುವಟಿಕೆಗಳನ್ನು ಅಳವಡಿಸುವ ಕುರಿತಾಗಿ ಪ್ರಾಯೋಗಿಕ ಚಟುವಟಿಕೆಗಳೊಂದಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಂಗಳೂರು ಆಕ್ಸ್ಫರ್ಡ್ ಜೋನಲ್ ಮ್ಯಾನೇಜರ್ ಶ್ರೀ ಸುಜಿತ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರು ಭಾಗವಹಿಸಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ಸುಮಾ ಶ್ರೀನಾಥ್ ಹಾಗೂ ಶ್ರೀಮತಿ ಸ್ಮೃತಿ ಜೈನ್ ಪ್ರಾರ್ಥನೆ ಮಾಡಿದರು.

Related posts

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!