23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

ಉಜಿರೆ: ಮನುಷ್ಯನ ಬದುಕಿನ ಅವಿಭಾಜ್ಯ ಅಂಗ ಮನಸ್ಸು. ಮನಸ್ಸು ಸ್ಥಿಮಿತದಲ್ಲಿ ಇಲ್ಲವಾದಲ್ಲಿ ಕಾಯಿಲೆ ಬರುವುದು, ಕೋಪ, ಹಠ, ಸಿಟ್ಟು ಮುಂತಾದ ಅನೇಕ ಸಮಸ್ಯೆಗಳು ಬರುವುದರಿಂದ ಜೀವನದಲ್ಲಿ ದೇಹದ ಆರೋಗ್ಯ ಕಾಪಾಡುವುದಕ್ಕಿಂತಲೂ ಮನಸ್ಸಿನ ಆರೋಗ್ಯ ಕಾಪಾಡುವುದು ಅಗತ್ಯ ಎಂದು ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮೇಘನಾ ಅಭಿಪ್ರಾಯಪಟ್ಟರು.


ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಸೆ. 20 ರಂದು ಇಲ್ಲಿನ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪರೋಪಕಾರ ಮತ್ತು ನಿಸ್ವಾರ್ಥ ಸೇವೆಯಿಂದ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ, ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದರಿಂದ ಮನಸ್ಸನ್ನು ಸ್ಥಿಮಿತದಲ್ಲಿ ಇಟ್ಟುಕೊಳ್ಳಬಹುದು ಎಂದು ಅವರು ತಿಳಿಸಿದರು.
ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ದಿವ್ಯಾ, ಸಂಗೀತ ಮತ್ತು ಸಿಂಧು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಮ ಹಾಗೂ ಉಲ್ಲಾಸ್ ಎಂ.ಆರ್. ಯೋಗದ ಮಹತ್ವದ ಮಾಹಿತಿ ನೀಡಿದರು.


ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇಂಗ್ಲಿಷ್ ಉಪನ್ಯಾಸಕ ಸಚಿನ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya
error: Content is protected !!